¶ “ನಾನು ಅವರ ಮಧ್ಯದಲ್ಲಿ ವಾಸಮಾಡುವುದಕ್ಕೆ ನನಗೆ ಒಂದು ಗುಡಾರವನ್ನು ಕಟ್ಟಿಸಬೇಕು.
TSK
TSK · ಅರಣ್ಯಕಾಂಡ 35:34
Treasury of Scripture Knowledge references in ಕನ್ನಡ IRV.
¶ “‘ಈ ದುರಾಚಾರಗಳಲ್ಲಿ ಯಾವುದರಿಂದಲೂ ನೀವು ಅಶುದ್ಧರಾಗಬಾರದು. ನಾನು ನಿಮ್ಮ ಎದುರಿನಿಂದ ಮೊದಲು ಹೊರಡಿಸಿದ ಜನಾಂಗಗಳವರು ಇಂಥ ದುರಾಚಾರಗಳಿಂದ ಅಶುದ್ಧರಾದರು.
ನಿಮಗಾದರೂ, ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ, ಹಾಲೂ ಮತ್ತು ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ. ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಯೆಹೋವನು.
ಅವರು ಒಟ್ಟಾಗಿ ಕೂಡಿಕೊಂಡು ಮೋಶೆ ಮತ್ತು ಆರೋನರ ಬಳಿಗೆ ಬಂದು ಅವರಿಗೆ, “ನೀವು ಹೆಚ್ಚು ಅಧಿಕಾರ ನಡೆಸುತ್ತೀರಿ. ಈ ಸಮೂಹದವರಲ್ಲಿ ಪ್ರತಿಯೊಬ್ಬನು ದೇವರಿಗೆ ಪ್ರತಿಷ್ಠಿತನಾದವನು, ಯೆಹೋವನು ಇವರೆಲ್ಲರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ಯೆಹೋವನ ಸಮೂಹದವರಿಗಿಂತಲೂ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಕೇಳಿದರು.
ಅದು ರಾತ್ರಿಯೆಲ್ಲಾ ಮರದ ಮೇಲೆ ಇರಬಾರದು; ಅದೇ ದಿನದಲ್ಲಿ ಅದನ್ನು ನೆಲದಲ್ಲಿ ಹೂಣಿಡಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶವು ಅಪವಿತ್ರವಾಗಬಾರದು. ಮರಕ್ಕೆ ತೂಗಹಾಕಲ್ಪಟ್ಟವನು ದೇವರ ಶಾಪವನ್ನು ಹೊಂದಿದವನಾಗಿರುತ್ತಾನೆ.
ಆತನು, “ಇದು ನನ್ನ ಶಾಶ್ವತ ವಾಸಸ್ಥಾನ; ಇಲ್ಲೇ ಇರುವೆನು; ಇದು ನನಗೆ ಇಷ್ಟ.
“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.
¶ ನೀನು, “ಈ ಎರಡು ಜನಾಂಗಗಳೂ ಈ ಎರಡು ದೇಶಗಳೂ ನನ್ನ ವಶವಾಗುವವು” ಎಂದೂ ಹೇಳಿದ್ದರಿಂದ, ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ ಎಂದು ಅಂದುಕೊಂಡು, ಅಲ್ಲಿ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದರಿಂದ,
ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.