TSK

TSK · ಅರಣ್ಯಕಾಂಡ 36:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೋಸೇಫನ ಕುಮಾರ ಮನಸ್ಸೆಯ ವಂಶದವರೊಳಗೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನಾದ ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬುವವರು ಮೋಶೆಯ ಬಳಿ ಒಂದು ವಿಜ್ಞಾಪನೆಯನ್ನು ಮಾಡಿಕೊಳ್ಳುವುದಕ್ಕೆ ಬಂದರು.

ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ, ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವತ್ತು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.

¶ ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ

¶ ಯೋಬನ ಮಕ್ಕಳಷ್ಟು ಸುಂದರಸ್ತ್ರೀಯರು ಆ ದೇಶದಲ್ಲಿ ಎಲ್ಲಿಯೂ ಸಿಕ್ಕುತ್ತಿರಲಿಲ್ಲ. ತಂದೆಯು ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸ್ವತ್ತನ್ನು ಹಂಚಿದನು.