ವಿಮೋಚನಕಾಂಡ 19:21
TSK
ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
TSK
Treasury of Scripture Knowledge references in ಕನ್ನಡ IRV.
ಆಗ ಯೆಹೋವನು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಗಡಿಯನ್ನು ದಾಟಿ ಯೆಹೋವನ ಹತ್ತಿರಕ್ಕೆ ಬಂದರೆ ಅವರಲ್ಲಿ ಬಹಳ ಜನರು ನಾಶವಾಗುವರು.
ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”
ಭೂಮಿಯು ಬಾಯ್ದೆರೆದು ಅವರನ್ನೂ ಮತ್ತು ಕೋರಹನಿಗೆ ಸೇರಿದ ಮನುಷ್ಯರೆಲ್ಲರನ್ನೂ, ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.
ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.