TSK

TSK · ಅರಣ್ಯಕಾಂಡ 4:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.

¶ “ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು, ಆರೋನನಿಗೋಸ್ಕರವೂ ಸರ್ವಸಮೂಹದವರಿಗೋಸ್ಕರವೂ ದೇವಸ್ಥಾನದ ಸೇವಾಕಾರ್ಯವನ್ನು ನಡೆಸಬೇಕು.

ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಲೆಕ್ಕಿಸಬೇಕು.

ಮೂವತ್ತರಿಂದ ಐವತ್ತು ವರ್ಷದವರೆಗೂ ವಯಸ್ಸುಳ್ಳವರಾಗಿ ದೇವದರ್ಶನದ ಗುಡಾರದ ಸೇವೆ ಮಾಡಲು ಅರ್ಹರಾದವರನ್ನು ಎಣಿಕೆ ಮಾಡಿದರು. ದೇವದರ್ಶನದ ಗುಡಾರದ ಸೇವಕಾರ್ಯವನ್ನು ಮಾಡಲೂ, ಅದರ ಜವಾಬ್ದಾರಿಗಳನ್ನು ನಿರ್ವಹಿಸುವವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಿದರು.

ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?

¶ ಲೇವಿಯರ ಪಟ್ಟಿಯಲ್ಲಿ ಬರೆಯಲ್ಪಟ್ಟ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಪ್ರಧಾನರು. ಇವರಲ್ಲಿ ಇಪ್ಪತ್ತು ವರ್ಷಕ್ಕಿಂತ ಹೆಚ್ಚಿನ ವಯಸ್ಸುಳ್ಳವರು ಯೆಹೋವನ ಆಲಯದಲ್ಲಿ ಸೇವೆಮಾಡತಕ್ಕವರಾಗಿದ್ದರು.

ಇವನು ಯೆಹೋವನ ಆಲಯದ ಅಂಗಳಗಳು, ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳು, ಭಂಡಾರಗಳು ಇವುಗಳ ವಿಷಯವಾಗಿಯೂ,

ಆ ಪಟ್ಟಿಯಲ್ಲಿ ಗೋತ್ರಗಳಿಗೆ ಅನುಸಾರವಾಗಿಯೂ ಆಯಾ ಉದ್ಯೋಗ ವರ್ಗಗಳಿಗೆ ಅನುಸಾರವಾಗಿಯೂ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳ ಯಾಜಕರು, ಲೇವಿಯರು,

¶ ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;

¶ ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.

¶ ಸಭಾಧ್ಯಕ್ಷನ ಉದ್ಯೋಗವನ್ನು ಪಡೆದುಕೊಳ್ಳಬೇಕೆಂದಿರುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.