TSK

TSK · ಅರಣ್ಯಕಾಂಡ 5:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.

ಮುಖಂಡರು ತಮ್ಮ ಸಹೋದರರೊಂದಿಗೆ ಸೇರಿಕೊಂಡು, ತಾವು ದೇವರ ಸೇವಕನಾದ ಮೋಶೆಯ ಮುಖಾಂತರ ಕೊಡಲ್ಪಟ್ಟ ದೇವರ ಧರ್ಮೋಪದೇಶವನ್ನು ಅನುಸರಿಸಿ ತಮ್ಮ ಕರ್ತನಾದ ಯೆಹೋವನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಅನುಸರಿಸಿ ನಡೆಯುವುದಾಗಿ ಆಣೆಯಿಟ್ಟು ಪ್ರಮಾಣ ಮಾಡಿದರು. ಹೇಗೆಂದರೆ:

ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವುದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.

ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.