TSK

TSK · ಅರಣ್ಯಕಾಂಡ 6:3

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.

ದ್ರಾಕ್ಷಾರಸವನ್ನು ಕುಡಿಯುವುದು ರಾಜರಿಗೆ ಯೋಗ್ಯವಲ್ಲ, ಲೆಮೂವೇಲನೇ, ಅದು ರಾಜರಿಗೆ ಯೋಗ್ಯವಲ್ಲ, “ಮದ್ಯವೆಲ್ಲಿ?” ಎನ್ನುವುದು ಪ್ರಭುಗಳಿಗೆ ವಿಹಿತವಲ್ಲ.

“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.

‹ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.›

ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,

ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ, ನಿನ್ನ ಅಜೀರ್ಣದ ಮತ್ತು ನಿನಗೆ ಆಗಾಗ್ಗೆ ಉಂಟಾಗುವ ಅಸ್ವಸ್ಥತೆಯ ಪರಿಹಾರಕ್ಕಾಗಿ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೊ.