ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.
TSK
TSK · ಅರಣ್ಯಕಾಂಡ 7:13
Treasury of Scripture Knowledge references in ಕನ್ನಡ IRV.
¶ “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
ದೇವರ ಸೇವೆಯಲ್ಲಿ ನೇಮಕವಾದ ಎಲ್ಲಾ ತೂಕವು ದೇವಾಲಯದ ಶೆಕೆಲ್ ಮೇರೆಗೆ ಇರಬೇಕು. ಇಪ್ಪತ್ತು ಗೇರಾ ತೂಕವು ಒಂದು ಶೆಕೆಲಿಗೆ ಸಮವಾಗಿರಬೇಕೆಂದು ಯಾವಾಗಲೂ ನಿರ್ಣಯಿಸಬೇಕು.
ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.
ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.
ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.