ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,
TSK
TSK · ಅರಣ್ಯಕಾಂಡ 8:7
Treasury of Scripture Knowledge references in ಕನ್ನಡ IRV.
ಆಮೇಲೆ ಅವನು ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ, ಅವನನ್ನು ಶುದ್ಧನೆಂದು ನಿರ್ಣಯಿಸಿ, ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು, ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯದೊಳಗೆ ಬರಬೇಕು.
¶ “ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲರ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನಮಾಡಬೇಕು. ಆದುದರಿಂದ ಶುದ್ಧೀಕರಣದ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅದನ್ನು ಅಲ್ಲೇ ಇಟ್ಟಿರಬೇಕು. ಅದು ಅಶುದ್ಧವಾದದ್ದು.
¶ “ಅಶುದ್ಧನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿ ಇಟ್ಟು, ಅದರ ಮೇಲೆ ಶುದ್ಧವಾದ ನೀರನ್ನು ಹಾಕಬೇಕು.
ನನ್ನ ಪಾಪವನ್ನು ಸಂಪೂರ್ಣವಾಗಿ ತೊಳೆದುಬಿಡು; ನನ್ನ ದೋಷವನ್ನು ಪರಿಹರಿಸಿ, ನನ್ನನ್ನು ಶುದ್ಧಿಗೊಳಿಸು.
ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.
ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.
ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.
ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.