ನಿಮ್ಮ ಬಳಿಯಲ್ಲಿ ವಾಸವಾಗಿರುವ ಪರದೇಶದವನು ಯೆಹೋವನಿಗೆ ಈ ಪಸ್ಕಹಬ್ಬವನ್ನು ಆಚರಿಸಬೇಕೆಂದು ಅಪೇಕ್ಷಿಸಿದರೆ ಅವನೂ, ಅವನಿಗೆ ಸೇರಿರುವ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ತರುವಾಯ ಅವನು ಈ ಹಬ್ಬವನ್ನು ಆಚರಿಸುವುದಕ್ಕೆ ಸಮೀಪ ಬರಲಿ. ಅಂಥವನು ಸ್ವದೇಶದವನಂತೆಯೇ ಇರುವನು. ಆದರೆ ಸುನ್ನತಿಮಾಡಿಸಿಕೊಳ್ಳದವನು ಆ ಭೋಜನವನ್ನು ತಿನ್ನಬಾರದು.
TSK
TSK · ಅರಣ್ಯಕಾಂಡ 9:14
Treasury of Scripture Knowledge references in ಕನ್ನಡ IRV.
ವಿಮೋಚನಕಾಂಡ 12:48
TSK
ಯಾಜಕಕಾಂಡ 19:10
TSK
ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಯಾಜಕಕಾಂಡ 24:22
TSK
ಅನ್ಯರಿಗಾಗಲಿ ಅಥವಾ ಸ್ವದೇಶದವರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಯೆಹೋವನು’” ಎಂಬುದೇ.
ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,
ಎಜ್ರನು 6:21
TSK
ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.
ಎಫೆಸದವರಿಗೆ 2:19
TSK
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.