TSK

TSK · ಅರಣ್ಯಕಾಂಡ 9:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.

ಯೆಹೋವನ ಅಪ್ಪಣೆಯನ್ನು ಹೊಂದಿ ಇಸ್ರಾಯೇಲರು ಪ್ರಯಾಣಮಾಡುತ್ತಿದ್ದರು, ಯೆಹೋವನ ಅಪ್ಪಣೆಯನ್ನು ಹೊಂದಿ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.

ಹಗಲಿನಲ್ಲಿ ಮೇಘಸ್ತಂಭವಾಗಿಯೂ, ರಾತ್ರಿ ವೇಳೆಯಲ್ಲಿ ಅವರು ನಡೆಯತಕ್ಕ ದಾರಿಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭವಾಗಿಯೂ ಅವರ ಮುಂದೆ ನೀನು ನಡೆದೆ.

ಹಗಲಿನಲ್ಲಿ ಮೋಡದಿಂದಲೂ, ರಾತ್ರಿಯಲ್ಲಿ ಬೆಂಕಿಯ ಬೆಳಕಿನಿಂದಲೂ, ಆತನು ಅವರನ್ನು ಕರೆದೊಯ್ದನು.

¶ ಆಮೇಲೆ ಯೆಹೋವನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೆಯೂ, ಅಲ್ಲಿ ನಡೆಯುವ ಸಭೆಗಳ ಮೇಲೆಯೂ, ಹಗಲಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಲ್ಲಿ ಪ್ರಜ್ವಲಿಸುವ ಅಗ್ನಿಯ ಪ್ರಕಾಶವನ್ನೂ ಉಂಟುಮಾಡುವನು. ಈ ಮಹಿಮೆಯು ಎಲ್ಲಾ ಕಡೆಯು ಆವರಿಸಿರುವುದು.

ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.