TSK

TSK · ಅರಣ್ಯಕಾಂಡ 9:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತರುವಾಯ ಇಸ್ರಾಯೇಲರ ಸಮೂಹವೆಲ್ಲಾ ಯೆಹೋವನ ಅಪ್ಪಣೆಯ ಮೇರೆಗೆ “ಸೀನ್” ಎಂಬ ಮರುಭೂಮಿಯಿಂದ ಹೊರಟು ಮುಂದೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿಯೂ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.

¶ ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.

¶ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.

ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.

ಇಸ್ರಾಯೇಲರನ್ನು ಕಾಯುವ ಕುರುಬನೇ, ಕಿವಿಗೊಡು; ಯೋಸೇಫನ ವಂಶದವರನ್ನು ಕುರಿಹಿಂಡಿನಂತೆ ಕರೆತಂದವನೇ, ಕೆರೂಬಿಯರ ಮಧ್ಯದಲ್ಲಿ ಆಸೀನನಾಗಿರುವಾತನೇ, ಪ್ರಕಾಶಿಸು.

‹ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ; ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಅವನು ತನ್ನ ಸ್ವಂತ ಕುರಿಗಳ ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.›