¶ ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಅಣ್ಣನಾದ ಏಸಾವನು ಮೈತುಂಬ ಅಧಿಕವಾಗಿ ರೋಮವುಳ್ಳವನಾಗಿದ್ದಾನೆ. ನಾನು ನುಣುಪಾದ ಚರ್ಮವುಳ್ಳವನು.
TSK
TSK · ಓಬದ್ಯ 1:10
Treasury of Scripture Knowledge references in ಕನ್ನಡ IRV.
¶ ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಮ್ಮ ಸಂಬಂಧಿಕರಾದ ಇಸ್ರಾಯೇಲರು ಕೇಳಿಕೊಳ್ಳುವುದೇನೆಂದರೆ, ನಮಗೆ ಸಂಭವಿಸಿದ ಎಲ್ಲಾ ಕಷ್ಟವನ್ನು ತಾವು ಕೇಳಿದ್ದೀರಿ.
ನಿನಗೋಸ್ಕರವಾಗಿ ನಿಂದೆಗೆ ಒಳಗಾದೆನಲ್ಲಾ; ನಾಚಿಕೆಯು ನನ್ನ ಮುಖವನ್ನು ಕವಿದಿದೆ.
ಅವನ ಯೌವನದ ದಿನಗಳನ್ನು ಬೇಗ ಮುಗಿಸಿ, ನಾಚಿಕೆಯು ಅವನನ್ನು ಕವಿಯುವಂತೆ ಮಾಡಿದ್ದಿ. ಸೆಲಾ
ಅವನ ವೈರಿಗಳನ್ನು ನಾಚಿಕೆಯೆಂಬ ವಸ್ತ್ರದಿಂದ ಹೊದಿಸುವೆನು; ಆದರೆ ಅವನ ಮೇಲೆ ಕಿರೀಟವು ಶೋಭಿಸುತ್ತಿರುವುದು.”
ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು, ಪರರ ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.
¶ ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.
ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.
ಊಚ್ ದೇಶದಲ್ಲಿ ವಾಸಿಸುವ ಎದೋಮೆಂಬ ಕನ್ಯೆಯೇ, ಹರ್ಷಿಸು, ಉಲ್ಲಾಸಗೊಳ್ಳು; ಆದರೆ ರೋಷಪಾನದ ಪಾತ್ರೆಯು ನಿನ್ನ ಪಾಲಿಗೂ ಬರುವುದು; ಅಮಲೇರಿದವಳಾಗಿ ನಿನ್ನನ್ನು ನೀನೇ ಬೆತ್ತಲೆಮಾಡಿಕೊಳ್ಳುವಿ.
ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವುದು; ಎಲ್ಲರ ಮುಖದಲ್ಲಿಯೂ ನಾಚಿಕೆ ಕಾಣುವುದು, ಎಲ್ಲರೂ ತಲೆ ಬೋಳಿಸಿಕೊಂಡು ಇರುವರು.
¶ “‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಯ ಕಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದೆ.
ಆಗ ನಾನೇ ಯೆಹೋವನು ಎಂದು ನೀನು ತಿಳಿದುಕೊಳ್ಳುವೆ. ನೀನು ಇಸ್ರಾಯೇಲಿನ ಪರ್ವತಗಳನ್ನು ನೋಡಿ, ಆಹಾ, ಹಾಳಾದವು! ನಮಗೆ ತುತ್ತಾಗಿವೆ ಎಂದು ಮಾಡಿದ ದೂಷಣೆಗಳು ಯೆಹೋವನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.
ಯೆಹೋವನು ಇಂತೆನ್ನುತ್ತಾನೆ: “ಎದೋಮ್ ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಕತ್ತಿ ಹಿಡಿದು ತನ್ನ ಸಹೋದರರನ್ನು ಹಿಂದಟ್ಟಿದನು, ಕರುಣೆಯನ್ನು ತೋರಿಸಲಿಲ್ಲ. ರೋಷವನ್ನು ಸಾಧಿಸಿದ್ದಾರೆ. ಇದರಿಂದ ಅವನ ಕೋಪವು ಸದಾ ಹರಿಯುತ್ತಿತ್ತು, ಆತನು ರೌದ್ರವನ್ನು ನಿರಂತರವಾಗಿ ಇಟ್ಟುಕೊಂಡನು.
“ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ, ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.