ಆಗ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಮತ್ತು ಯೆರೂಸಲೇಮಿನಲ್ಲಿ ವಾಸಿಸುವರೆಂದು ದಾಖಲೆಗೊಂಡ ಪ್ರತಿಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡುವನು.
TSK
TSK · ಓಬದ್ಯ 1:17
Treasury of Scripture Knowledge references in ಕನ್ನಡ IRV.
ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”
ಯಾಕೋಬಿನಿಂದ ಸಂತಾನವನ್ನು ಹುಟ್ಟಿಸುವೆನು, ಯೆಹೂದ ವಂಶದಿಂದ ನನ್ನ ಪರ್ವತಗಳ ಸ್ವತ್ತಿನ ಸಂತತಿಯನ್ನು ಬರಮಾಡುವೆನು, ನನ್ನ ಆಪ್ತರು ಆ ಸ್ವತ್ತನ್ನು ಅನುಭವಿಸುವರು, ನನ್ನ ಸೇವಕರು ಅಲ್ಲಿ ವಾಸಿಸುವರು.
ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.
ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”
ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನ ಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಾಯೇಲರೇ, ನಿನ್ನಲ್ಲಿ ಸಂಚರಿಸುತ್ತಾ ನಿನ್ನನ್ನು ಸ್ವತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರ ಶೋಕವನ್ನು ಕೊಡುವುದಿಲ್ಲ.’”
ಆದರೂ ಯೆಹೋವನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವುದು. ಯೆಹೋವನು ತಿಳಿಸಿದಂತೆ ಚೀಯೋನಿನ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಅನೇಕರು ಉಳಿಯುವರು. ಯೆಹೋವನು ಹೇಳಿದಂತೆಯೇ, ಉಳಿದವರಲ್ಲಿ ಯೆಹೋವನಿಂದ ಕರೆಯಲ್ಪಟ್ಟವರು ಬದುಕುವರು.”
ನಿಮ್ಮ ದೇವರಾದ ಯೆಹೋವನು ನಾನೇ ಎಂದು ನಿಮಗೆ ಮನದಟ್ಟಾಗುವುದು. ಆಗ ನಾನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ನೆಲೆಸುವುದರಿಂದ, ಯೆರೂಸಲೇಮ್ ಪವಿತ್ರವಾಗಿರುವುದು. ಅನ್ಯರು ಇನ್ನು ಅದರಲ್ಲಿ ಹಾದುಹೋಗುವುದಿಲ್ಲ.
ಇಗೋ, ಕರ್ತನಾದ ಯೆಹೋವನು ಪಾಪವುಳ್ಳ ರಾಜ್ಯದ ಮೇಲೆ ದೃಷ್ಟಿಯಿಟ್ಟಿದ್ದಾನೆ, ಮತ್ತು ಅದನ್ನು ಭೂಮಂಡಲದೊಳಗಿಂದ ನಾಶಮಾಡುವನು, ಆದರೆ ಯಾಕೋಬಿನ ಮನೆತನವನ್ನು ಸಂಪೂರ್ಣವಾಗಿ ನಾಶಮಾಡನು” ಇದು ಯೆಹೋವನ ನುಡಿ.
ಯೆಹೋವನು ಇಂತೆನ್ನುತ್ತಾನೆ, “ನಾನು ಚೀಯೋನಿಗೆ ಹಿಂದಿರುಗಿದ್ದೇನೆ, ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು; ಆಗ ಯೆರೂಸಲೇಮ್ ಸತ್ಯದ ಪಟ್ಟಣವೆಂದು ಅನ್ನಿಸಿಕೊಳ್ಳುವುದು, ಸೇನಾಧೀಶ್ವರ ಯೆಹೋವನ ಪರ್ವತಕ್ಕೆ ಪರಿಶುದ್ಧ ಪರ್ವತವೆಂಬ ಹೆಸರು ಬರುವುದು.”
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.