TSK

TSK · ಓಬದ್ಯ 1:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವುಗಳು ಯಾವುವೆಂದರೆ: ಐಗುಪ್ತದ ಈಚೆಯಲ್ಲಿರುವ ಶೀಹೋರ್ ಹಳ್ಳ ಮೊದಲುಗೊಂಡು ಕಾನಾನ್ಯರಿಗೆ ಸೇರಿರುವ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ

ಗಿಲ್ಯಾದಿನಲ್ಲಿ ಅರ್ಧ ಭಾಗವು ಓಗನ ರಾಜಧಾನಿಯಾಗಿದ್ದ, ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ಪಟ್ಟಣಗಳೂ ಮನಸ್ಸೆಯ ಮಗನಾದ ಮಾಕೀರನ ಗೋತ್ರದ ಅರ್ಧ ಜನರಿಗೆ ಸಿಕ್ಕಿದವು.

ಇಳಿಜಾರು ಪ್ರದೇಶದಲ್ಲಿ ಎಷ್ಟಾವೋಲ್, ಚೊರ್ಗಾ, ಅಶ್ನಾ

ಬೆನ್ಯಾಮೀನ್ ಗೋತ್ರಗಳ ಸ್ವತ್ತಿನ ಸುತ್ತಣ ಮೇರೆಯು ಇದೇ ಬೆನ್ಯಾಮೀನನ ಗೋತ್ರಗಳಿಗೆ ದೊರಕಿದ ಪಟ್ಟಣಗಳು ಯಾವುವೆಂದರೆ: ಯೆರಿಕೋ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,

¶ ಅಶ್ಶೂರದ ಅರಸನು ಸಮಾರ್ಯಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಾಯೇಲರನ್ನು ಸೆರೆಯಾಗಿ ಒಯ್ದ ನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಅಲ್ಲಿಗೆ ಕಳುಹಿಸಿದನು. ಅವರು ಸಮಾರ್ಯ ದೇಶವನ್ನು ಸ್ವತಂತ್ರಪಡಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಮಾಡಿದರು.

ಆಗ ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು ಅವರಿಗೆ, “ನಿಮ್ಮೊಡನೆ ದೇವಾಲಯ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ, ಯಾಕೆಂದರೆ ನಿಮ್ಮಂತೆ ನಾವು ನಿಮ್ಮ ದೇವರ ಭಕ್ತರಾಗಿದ್ದೇವೆ. ನಮ್ಮನ್ನು ಇಲ್ಲಿ ತಂದಿರಿಸಿದ ಅಶ್ಶೂರದ ಅರಸನಾದ ಏಸರ್ಹದ್ದೋನನ ಕಾಲದಿಂದ ನಾವು ಆತನಿಗೇ ಯಜ್ಞಸಮರ್ಪಣೆಯನ್ನು ಮಾಡುತ್ತಾ ಬಂದಿದ್ದೇವೆ” ಎಂದು ಹೇಳಿದರು.

¶ ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.

ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗುವುದು. ಯೆಹೂದವನ್ನು ವಿರೋಧಿಸುವವರು ನಿರ್ಮೂಲವಾಗುವರು. ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚುಪಡುವುದಿಲ್ಲ. ಯೆಹೂದವು ಎಫ್ರಾಯೀಮನ್ನು ವಿರೋಧಿಸುವುದಿಲ್ಲ.

ಇಸ್ರಾಯೇಲೆಂಬ ಯುವತಿಯೇ, ನಾನು ನಿನ್ನ ಹಾಳುಪ್ರದೇಶಗಳನ್ನು ಪುನಃ ಕಟ್ಟುವೆನು; ಅವು ಕಟ್ಟಡಗಳಾಗುವವು. ನೀನು ಮತ್ತೆ ದಮ್ಮಡಿಗಳಿಂದ ವೈಭವಗೊಂಡು ವಿನೋದಪಡುವವರ ನಾಟ್ಯಗಳಲ್ಲಿ ಸೇರಿಕೊಳ್ಳುವಿ.

ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?

ಹೀಗಿರಲು ಇಸ್ರಾಯೇಲ್ ದೇಶದ ವಿಷಯವಾದ ಈ ಪ್ರವಾದನೆಯನ್ನು ಅದರ ಬೆಟ್ಟಗಳಿಗೆ, ಗುಡ್ಡಗಳಿಗೆ, ತೊರೆತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ. ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಆಹಾ! ನಾನು ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ಮಾತನಾಡಿದ್ದೇನೆ, ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ!’

ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.

¶ ಹಂಚುವಿಕೆಯನ್ನು ಅನುಸರಿಸಿ ಕುಲಗಳ ಹೆಸರುಗಳು ಇವೇ. ದೇಶದ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನ್ ಕುಲಕ್ಕೆ ಒಂದು ಭಾಗವಿದೆ. ಅದರ ಉತ್ತರ ಮೇರೆಯು ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು, ಹಮಾತಿನ ದಾರಿಯನ್ನು ದಾಟಿ, ದಮಸ್ಕದ ಮೇರೆಯಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು. ಅದರ ಕಡೆಗಳು ದೇಶದ ಪೂರ್ವ, ಪಶ್ಚಿಮಗಳ ಮೇರೆಗಳ ತನಕ ಚಾಚಿಕೊಂಡಿರುವವು.

ಯೆಹೋವನು ಇಂತೆನ್ನುತ್ತಾನೆ, “ಅಮ್ಮೋನ್ಯರು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ತಮ್ಮ ದೇಶವನ್ನು ವಿಸ್ತರಿಸಬೇಕೆಂದು ಗಿಲ್ಯಾದಿನ ಗರ್ಭಿಣಿಯರ ಹೊಟ್ಟೆಯನ್ನು ಸೀಳಿಬಿಟ್ಟರು.

ಫಲವತ್ತಾದ ಭೂಮಿಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವತ್ತಾದ ಹಿಂಡನ್ನು ನಿನ್ನ ದಿವ್ಯಹಸ್ತದಿಂದ ಮೇಯಿಸು. ಪೂರ್ವಕಾಲದಂತೆ ಬಾಷಾನಿನಲ್ಲಿಯೂ, ಗಿಲ್ಯಾದಿನಲ್ಲಿಯೂ ಮೇಯಲಿ.

ಅಷ್ಕೆಲೋನು ಇದನ್ನು ನೋಡಿ ಹೆದರುವುದು; ಗಾಜವು ಸಹ ಅತಿ ಸಂಕಟಪಡುವುದು; ಎಕ್ರೋನು ನಿರೀಕ್ಷೆಗೆಟ್ಟು ಬಹು ವ್ಯಥೆಗೆ ಒಳಗಾಗುವುದು; ಗಾಜಕ್ಕೆ ರಾಜನೇ ಇಲ್ಲವಾಗುವನು; ಅಷ್ಕೆಲೋನು ನಿರ್ಜನವಾಗುವುದು;