ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
TSK
TSK · ಓಬದ್ಯ 1:20
Treasury of Scripture Knowledge references in ಕನ್ನಡ IRV.
ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.
ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.
ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.
ಇಸ್ರಾಯೇಲರ ಸಂಖ್ಯೆಯು ಅಳೆಯುವುದಕ್ಕೂ, ಲೆಕ್ಕಿಸುವುದಕ್ಕೂ ಅಸಾಧ್ಯವಾದ ಸಮುದ್ರತೀರದ ಮರಳಿನಂತಾಗುವುದು. ಆಗ ಅವರು ನನ್ನ ಪ್ರಜೆಯಲ್ಲ ಎನಿಸಿಕೊಳ್ಳುವುದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
¶ ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು.