TSK

TSK · ಓಬದ್ಯ 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಹದ್ದು ಮೇಲಕ್ಕೆ ಹಾರಿ ಉನ್ನತದಲ್ಲಿ ಗೂಡುಮಾಡುವುದು ನಿನ್ನ ಅಪ್ಪಣೆಯಿಂದಲೋ?

ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”

ಪಾತಾಳದವರೆಗೆ ತೋಡಿಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು, ಸ್ವರ್ಗದ ತನಕ ಹತ್ತಿದರೂ ಅಲ್ಲಿಂದಲೂ ಅವರನ್ನು ಇಳಿಸುವೆನು.