TSK

TSK · ಫಿಲೆಮೋನನಿಗೆ 1:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮಲ್ಲಿ ನನಗೆ ಬಹಳ ಭರವಸೆ ಉಂಟು, ಗಾಢವಾದ ಅಭಿಮಾನವುಂಟು. ನಾನು ಎಲ್ಲಾ ಸಂಕಟಗಳಲ್ಲಿಯೂ ಎದೆಗುಂದದೆ ಆನಂದಭರಿತನಾಗಿದ್ದೇನೆ.

ಕ್ರಿಸ್ತ ಯೇಸುವಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿಗೋಸ್ಕರ ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.

¶ ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ, ಪ್ರಿಯರೇ.

¶ ಸಹೋದರರೇ, ಈ ವಾರ್ತೆಯನ್ನು ಕೇಳಿ ನಮ್ಮ ಎಲ್ಲಾ ಕಷ್ಟದಲ್ಲಿಯೂ ಸಂಕಟದಲ್ಲಿಯೂ ನಿಮ್ಮ ನಂಬಿಕೆಯ ಮುಖಾಂತರ ನಮಗೆ ಸಮಾಧಾನವಾಯಿತು.

ನನಗೆ ಪ್ರಾಣ ಪ್ರಿಯನಂತಿರುವ ಅವನನ್ನು ನಿನ್ನ ಬಳಿಗೆ ಕಳುಹಿಸಿ ಕೊಡುತ್ತಿದ್ದೇನೆ.

ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?