TSK

TSK · ಫಿಲಿಪ್ಪಿಯವರಿಗೆ 2:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.

ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.

‹ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ. ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.›

¶ ‹“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.›

ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

‹ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.›

ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.

ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.

¶ ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.

ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

¶ ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಶುದ್ಧೀಕರಿಸಲಿ. ನಮ್ಮ ಕರ್ತನಾದ ಯೇಸು ಕ್ರಿಸ್ತನು ಹಿಂತಿರುಗಿ ಬರುವಾಗ ನಿಮ್ಮ ಆತ್ಮ, ಪ್ರಾಣ ಮತ್ತು ಶರೀರಗಳು ದೋಷವಿಲ್ಲದೆ ಪರಿಪೂರ್ಣವಾಗಿ ಕಾಣಿಸಿಕೊಳ್ಳುವಂತೆ ಕಾಪಾಡಲ್ಪಡಲಿ.

ಇದಲ್ಲದೆ ಅವರು ಮೊದಲು ಪರೀಕ್ಷಿಸಲ್ಪಡಬೇಕು, ತರುವಾಯ ಅವರ ಮೇಲೆ ಯಾರೂ ತಪ್ಪುಹೊರಿಸದಿದ್ದರೆ ಸಭಾಸೇವಕರ ಉದ್ಯೋಗವನ್ನು ನೆರವೇರಿಸಲಿ.

ಆದ್ದರಿಂದ ಯೌವನ ಪ್ರಾಯದ ವಿಧವೆಯರು ಮದುವೆಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯನ್ನು ನಿರ್ವಹಿಸುವವರಾಗಿರುವುದು ನನಗೆ ಒಳ್ಳೆಯದಾಗಿ ತೋಚುತ್ತದೆ. ಹಾಗೆ ಮಾಡುವುದರಿಂದ ವಿರೋಧಿಗಳ ನಿಂದೆಗೆ ಆಸ್ಪದಕೊಡದೆ ಇರುವರು.

ಸಭೆಯ ಹಿರಿಯನು ದೋಷರಹಿತನೂ, ಏಕಪತ್ನಿಯುಳ್ಳವನೂ ಆಗಿರಬೇಕು; ಆತನ ಮಕ್ಕಳು ಕರ್ತನನ್ನು ನಂಬಿದವರಾಗಿರಬೇಕು; ಅವರ ಮಕ್ಕಳು ದುರ್ಮಾರ್ಗಿಗಳೂ ಮತ್ತು ಅವಿಧೇಯತೆಯ ಆರೋಪವಿಲ್ಲದವರು ಆಗಿರಬೇಕು.

¶ ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.

ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ,

ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.

¶ ಇಗೋ, ನಾವು ದೇವರ ಮಕ್ಕಳೆಂದು ಕರೆಯಲ್ಪಡುವುದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ! ನಾವು ಆತನ ಮಕ್ಕಳಾಗಿದ್ದೇವೆ. ಲೋಕವು ಆತನನ್ನು ಅರ್ಥಮಾಡಿಕೊಳ್ಳದೆ ಇರುವುದರಿಂದ ನಮ್ಮನ್ನೂ ಅರ್ಥಮಾಡಿಕೊಳ್ಳುವುದಿಲ್ಲ.