ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.
TSK
TSK · ಫಿಲಿಪ್ಪಿಯವರಿಗೆ 2:19
Treasury of Scripture Knowledge references in ಕನ್ನಡ IRV.
ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”
ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.
¶ ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.
ಆದ್ದರಿಂದ ನನ್ನ ವಿಷಯವು ಹೇಗಾಗುವುದೋ ಅದನ್ನು ತಿಳಿದ ಕೂಡಲೆ ಅವನನ್ನೇ ಕಳುಹಿಸುವುದಕ್ಕೆ ಬಯಸುತ್ತೇನೆ.
ನೀವು ನಮ್ಮ ಕುರಿತು ತಿಳಿದುಕೊಳ್ಳುವಂತೆ, ಅವನು ನಿಮ್ಮ ಹೃದಯಗಳನ್ನು ಉರಿದುಂಬಿಸುವಂತೆ,
¶ ಆದರೆ ತಿಮೊಥೆಯನು ನಿಮ್ಮ ಬಳಿಯಿಂದ ಬಂದು ನಿಮ್ಮ ನಂಬಿಕೆ ಮತ್ತು ಪ್ರೀತಿಯ ಕುರಿತಾಗಿ ಶುಭವರ್ತಮಾನವನ್ನು ಹೇಳಿ, ನೀವು ನಮ್ಮನ್ನು ಯಾವಾಗಲೂ ಪ್ರೀತಿಪೂರ್ವಕವಾಗಿ ನೆನಪುಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ಸಹ ನಮ್ಮನ್ನು ನೋಡುವುದಕ್ಕಾಗಿ ಅಪೇಕ್ಷಿಸುತ್ತಿದ್ದೀರೆಂಬುದನ್ನು ತಿಳಿಸಿದ್ದಾನೆ.
ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.
ಆದುದರಿಂದ ನೀವು ಅಂಥ ಮಾತನ್ನು ಬಿಟ್ಟು “ಕರ್ತನ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ ಆ ಕೆಲಸವನ್ನಾಗಲಿ ಮಾಡುವೆವು” ಎಂದು ಹೇಳಬೇಕು.
ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.