TSK

TSK · ಫಿಲಿಪ್ಪಿಯವರಿಗೆ 2:25

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.›

ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.

¶ ನೀವು ಅಭಿವೃದ್ಧಿಹೊಂದಬೇಕೆಂದು ನನ್ನನ್ನು ನಾನೇ ತಗ್ಗಿಸಿಕೊಂಡು ದೇವರ ಸುವಾರ್ತೆಯನ್ನು ನಿಮಗೆ ಉಚಿತವಾಗಿ ಸಾರಿದರಲ್ಲಿ ಪಾಪಮಾಡಿದ್ದೇನೋ?

ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.

ಯುಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆಸೇವಕರಾಗಿದ್ದಾರೆ, ಇವರಿಂದ ನನಗೆ ಆದರಣೆ ಉಂಟಾಯಿತು.

ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಕಷ್ಟವನ್ನನುಭವಿಸು.

ನನ್ನ ಜೊತೆಗೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ, ಲೂಕ ಇವರೆಲ್ಲರೂ ನಿನಗೆ ವಂದನೆ ತಿಳಿಸಿದ್ದಾರೆ.