ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
TSK
TSK · ಫಿಲಿಪ್ಪಿಯವರಿಗೆ 2:3
Treasury of Scripture Knowledge references in ಕನ್ನಡ IRV.
‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.
ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಾಡಿ, ಹರಕೊಂಡು, ತಿನ್ನುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.
ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.
ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ಗೊಣಗುಟ್ಟದೆಯೂ, ವಿವಾದಗಳಿಲ್ಲದೆಯೂ ಎಲ್ಲವನ್ನು ಮಾಡಿರಿ.
ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.
ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?
¶ ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”