‹ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.›
TSK
TSK · ಫಿಲಿಪ್ಪಿಯವರಿಗೆ 2:5
Treasury of Scripture Knowledge references in ಕನ್ನಡ IRV.
‹ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.›
ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‹‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’› ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
ಯಾಕೆಂದರೆ ಕ್ರಿಸ್ತನು ಸಹ ತನ್ನ ಹಿತಕ್ಕಾಗಿ ಚಿಂತಿಸಲಿಲ್ಲ. “ದೇವರೇ ನಿನ್ನನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೂ ಬಂದವು” ಎಂದು ಬರೆದಿದೆಯಲ್ಲಾ.
ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು.
ಆತನಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಕ್ರಿಸ್ತನು ನಡೆದಂತೆಯೇ ತಾನೂ ನಡೆಯುವುದಕ್ಕೆ ಬದ್ಧನಾಗಿದ್ದಾನೆ.