TSK

TSK · ಫಿಲಿಪ್ಪಿಯವರಿಗೆ 3:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ನಿಮ್ಮೊಳಗೆ ಏಕಮನಸ್ಸುಳ್ಳವರಾಗಿರಿ ದೊಡ್ಡಸ್ತಿಕೆಯ ಮೇಲೆ ಮನಸ್ಸಿಡದೆ ದೀನರನ್ನು ಸ್ವೀಕರಿಸಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.

ಚೆನ್ನಾಗಿ ಓಡುತ್ತಾ ಇದ್ದೀರಿ. ಆದರೆ ನೀವು ಸತ್ಯವನ್ನು ಅನುಸರಿಸದಂತೆ ನಿಮ್ಮನ್ನು ತಡೆದವರು ಯಾರು?

ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ನೀವೆಲ್ಲರು ಒಂದೇ ಮನಸ್ಸುವುಳ್ಳವರಾಗಿ, ಒಂದೇ ಪ್ರೀತಿಯುಳ್ಳವರಾಗಿ, ಅನ್ಯೋನ್ಯಭಾವವುಳ್ಳವರಾಗಿ ಹಾಗೂ ಒಂದೇ ಗುರಿಯಿಟ್ಟುಕೊಂಡವರಾಗಿ ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ.

¶ ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.

ಮುಖ್ಯವಾಗಿ ಶಾರೀರಿಕ ಬಂಡುತನದ ದುರಾಶೆಗಳಲ್ಲಿ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೇ ಸ್ವೇಚ್ಛಾಪರರಾಗಿದ್ದಾರೆ. ಮಹಿಮಾಪದವಿಯವರನ್ನು ನಿರ್ಭಯವಾಗಿ ದೂಷಿಸುವರು.

‹ಆದುದರಿಂದ ನೀನು ಹೊಂದಿಕೊಂಡಿದ್ದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದು ಅದನ್ನು ಕಾಪಾಡಿಕೊಂಡು ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ನೀನು ಎಚ್ಚರಗೊಳ್ಳದಿದ್ದರೆ›‹ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನಲ್ಲಿಗೆ ಬರುವೆನೆಂಬುದು ನಿನಗೆ ತಿಳಿಯುವುದೇ ಇಲ್ಲ.›