TSK

TSK · ಫಿಲಿಪ್ಪಿಯವರಿಗೆ 4:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ.

“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”

¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›

‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.

ಆತನು ಅವರಿಗೆ, ‹“ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿಯು ಸಹೋದರರು ಆಗಿದ್ದಾರೆ”› ಎಂದು ಉತ್ತರಕೊಟ್ಟನು.

‹ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.›

‹ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ಅಲ್ಲಿ ನಿನಗೆ ತಿಳಿಸಲ್ಪಡುವುದು”› ಎಂದು ಹೇಳಿದನು.

ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ತುಳಿದು ಜಜ್ಜಿಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.

¶ ಕಡೆಯದಾಗಿ ಸಹೋದರರೇ, ಸಂತೋಷಪಡಿರಿ! ಕ್ರಮಪಡಿಸಿಕೊಳ್ಳಿರಿ. ಧೈರ್ಯವುಳ್ಳವರಾಗಿರಿ, ಏಕ ಮನಸ್ಸುಳ್ಳವರಾಗಿರಿ, ಸಮಾಧಾನದಿಂದ ಇರಿ; ಆಗ ಪ್ರೀತಿಸ್ವರೂಪನೂ, ಶಾಂತಿದಾಯಕನೂ ಆದ ದೇವರು ನಿಮ್ಮ ಸಂಗಡ ಇರುವನು.

ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ, ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಪಾಡುವುದು.

ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.

¶ ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.

ನಾವು ಆಜ್ಞಾಪಿಸುವ ಪ್ರಕಾರ ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ, ನಿಮ್ಮ ವಿಷಯದಲ್ಲಿ ಕರ್ತನ ಮೂಲಕವಾಗಿ ನಮಗೆ ಭರವಸವುಂಟು.

¶ ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.

ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.

ಆತನ ಆಜ್ಞೆಗಳನ್ನು ಕೈಕೊಂಡು ಆತನಿಗೆ ಮೆಚ್ಚಿಕೆಯಾಗುವ ಕಾರ್ಯಗಳನ್ನು ಮಾಡುವವರಾದರೆ ನಾವು ಏನು ಬೇಡಿಕೊಂಡರೂ ಆತನಿಂದ ಹೊಂದುವೆವು.