ನನ್ನ ದೇವರೇ, ರಾಜನೇ, ನಿನ್ನನ್ನು ಘನಪಡಿಸುವೆನು, ನಿನ್ನ ನಾಮವನ್ನು ಯುಗಯುಗಾಂತರಗಳಲ್ಲಿಯೂ ಕೊಂಡಾಡುವೆನು.
TSK
TSK · ಙ್ಞಾನೋಕ್ತಿಗಳು 1:23
Treasury of Scripture Knowledge references in ಕನ್ನಡ IRV.
ನನ್ನ ಬೋಧನೆಯನ್ನು ಕೇಳಲೊಲ್ಲದೆ, ನನ್ನ ಗದರಿಕೆಯನ್ನೆಲ್ಲಾ ತಾತ್ಸಾರಮಾಡಿದರು.
ಶಿಕ್ಷೆಯನ್ನು ಕೈಕೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು, ಗದರಿಕೆಯನ್ನು ಕೈಕೊಳ್ಳದವನು ಸನ್ಮಾರ್ಗದಿಂದ ತಪ್ಪಿಸುವನು.
ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ಆಕಾಶಮಂಡಲವೇ, ಮೇಲಿನಿಂದ ಧರ್ಮರಸವನ್ನು ಮಳೆಯಂತೆ ಸುರಿಸು. ಭೂಮಿಯು ಒಡೆದು ರಕ್ಷಣೆಯನ್ನು ಮೊಳೆಯಿಸಿ, ಅದರೊಡನೆ ನೀತಿಫಲವನ್ನು ಬೆಳೆಯಿಸಲಿ. ಯೆಹೋವನೆಂಬ ನಾನೇ ಇದಕ್ಕೆಲ್ಲಾ ಕರ್ತನು.
ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.
ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನೀತಿನ್ಯಾಯಗಳನ್ನು ನಡೆಸಿದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
ತರುವಾಯ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು. ನಿಮ್ಮ ಪುತ್ರಪುತ್ರಿಯರು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು. ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು.
¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.
‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
‹ನೀನು ಬೆಚ್ಚಗೂ ಅಲ್ಲದೆ ತಣ್ಣಗೂ ಅಲ್ಲದೆ ಉಗುರು ಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಉಗಿದು ಬಿಡುವೆನು.›