TSK

TSK · ಙ್ಞಾನೋಕ್ತಿಗಳು 1:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಅವಳ ಮನೆಯು ಪಾತಾಳಕ್ಕೆ ಇಳಿಯುವ ದಾರಿ, ಅವಳ ಮಾರ್ಗಗಳು ಪ್ರೇತಲೋಕಕ್ಕೆ ಹೋಗುತ್ತವೆ.

ಆ ಮನೆಯು ಪ್ರೇತ ನಿವಾಸವೆಂದೂ ಅವಳ ಅತಿಥಿಗಳು ಅಗಾಧಪಾತಾಳದಲ್ಲಿ ಬಿದ್ದಿರುವರೆಂದೂ ಅವನಿಗೆ ತಿಳಿಯದು.

ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.

ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

¶ ಅದೇನೆಂದರೆ ‹“ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.›

ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.

ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.