ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ, ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.
TSK
TSK · ಙ್ಞಾನೋಕ್ತಿಗಳು 10:17
Treasury of Scripture Knowledge references in ಕನ್ನಡ IRV.
ಕಂದಾ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಳ್ಳು.
ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
¶ ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?
ಅದಕ್ಕೆ ಯೇಸು, ‹“ಹಾಗನ್ನ ಬೇಡ, ದೇವರ ವಾಕ್ಯವನ್ನು ಕೇಳಿ ಅದನ್ನು ಅನುಸರಿಸುವವನು ಹೆಚ್ಚು ಧನ್ಯನು”› ಅಂದನು.
ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?