TSK

TSK · ಙ್ಞಾನೋಕ್ತಿಗಳು 10:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನ ಕಾಲವು ಕೊನೆಮುಟ್ಟುವುದಕ್ಕೆ ಮೊದಲೇ ಆ ಪ್ರತಿಫಲವು ತಲುಪಿಬಿಡುವುದು. ಅವನ ಕೊಂಬೆಯು ಹಸುರಾಗಿರುವುದಿಲ್ಲ,

ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.

ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.

ಜ್ಞಾನವೆಂಬಾಕೆಯ ಬಲಗೈಯಲ್ಲಿ ದೀರ್ಘಾಯುಷ್ಯವೂ, ಎಡಗೈಯಲ್ಲಿ ಧನವೂ, ಘನತೆಯೂ ಉಂಟು.

ನೀನು ಅತಿಯಾಗಿ ದುಷ್ಟನಾಗಿರಬೇಡ ಇಲ್ಲವೇ ಮೂರ್ಖನಾಗಿರಬೇಡ, ಏಕೆ ಅಕಾಲ ಮರಣವನ್ನು ಹೊಂದುವಿ?

¶ ‹“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವನ್ನು ನಿನ್ನಿಂದ ಕೇಳಲ್ಪಡುವುದು. ಆಗ ನೀನು ಕೂಡಿಸಿಟ್ಟಿರುವುದು ಯಾರಿಗಾಗುವುದು?’ ಎಂದು ಕೇಳಿದನು.›