TSK

TSK · ಙ್ಞಾನೋಕ್ತಿಗಳು 10:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.

ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.

ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.

¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›

ಇದಲ್ಲದೆ ಉಳಿದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟತನದಿಂದ ವರ್ತಿಸಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು.