TSK

TSK · ಙ್ಞಾನೋಕ್ತಿಗಳು 14:34

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.

¶ ಯೆಹೋಶುವನು ಇಸ್ರಾಯೇಲ್ಯರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವಾಧೀನಮಾಡಿಕೊಂಡರು.

ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.