TSK

TSK · ಙ್ಞಾನೋಕ್ತಿಗಳು 15:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನನ್ನು ಕಂಡಕೂಡಲೆ, “ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?” ಅಂದನು.

ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.

ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,

ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.

ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ, ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.

ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.

ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು, ಅವನನ್ನು ಎಚ್ಚರಿಸಿದರೂ ಅವನು ಅದನ್ನು ಬಿಡದೆ ಹೋದರೆ ತನ್ನ ಅಪರಾಧದಲ್ಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವಿ.

‹ಲೋಕವು ನಿಮ್ಮನ್ನು ದ್ವೇಷಿಸಲಾರದು, ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.›