TSK

TSK · ಙ್ಞಾನೋಕ್ತಿಗಳು 15:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.

ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ಯೆಹೋವನ ಭಯವು ಪಾಪದ್ವೇಷವನ್ನು ಹುಟ್ಟಿಸುತ್ತದೆ; ಗರ್ವ, ಅಹಂಭಾವ, ದುರ್ಮಾರ್ಗತನ, ಕುಟಿಲ ಭಾಷಣ ಇವುಗಳನ್ನು ಹಗೆಮಾಡುತ್ತೇನೆ.

ರಾಜನ ಸನ್ನಿಧಾನದಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ, ಶ್ರೀಮಂತರಿಗೆ ಏರ್ಪಡಿಸಿರುವ ಸ್ಥಾನದಲ್ಲಿ ನಿಂತುಕೊಳ್ಳಬೇಡ.

‹ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.

ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.