TSK

TSK · ಙ್ಞಾನೋಕ್ತಿಗಳು 16:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿಕುಡಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.

ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು.

ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.

ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು, ಕಟ್ಟಕಡೆಗೆ ಅದು ಮರಣಮಾರ್ಗವೇ.

ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.

ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.

ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.

ತೆಕೇಲ್ ಎಂದರೆ, ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ನಿನ್ನ ಯೋಗ್ಯತೆ ಕಡಿಮೆಯಾಗಿ ಕಂಡು ಬಂದಿದೆ.

¶ ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

¶ ‹“ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ,›‹ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಕುಮಾರನು ಹೇಳುವುದೇನಂದರೆ,›