TSK

TSK · ಙ್ಞಾನೋಕ್ತಿಗಳು 16:24

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.

ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.

ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.

¶ ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, ‹“ನಿಮಗೆ›‹ಸಮಾಧಾನವಾಗಲಿ”› ಎಂದನು.