TSK

TSK · ಙ್ಞಾನೋಕ್ತಿಗಳು 16:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ತಂದೆಯು ಯಾಕೋಬನಿಗೆ ಮಾಡಿದ ಆಶೀರ್ವಾದದ ನಿಮಿತ್ತ ಏಸಾವನು ಯಾಕೋಬನನ್ನು ಹಗೆಮಾಡಿ ತನ್ನ ಮನಸ್ಸಿನೊಳಗೆ, “ತಂದೆಗೋಸ್ಕರ ದುಃಖಿಸುವ ಕಾಲ ಸಮೀಪಿಸಿತು. ತರುವಾಯ ನನ್ನ ತಮ್ಮನಾದ ಯಾಕೋಬನನ್ನು ಕೊಲ್ಲುವೆನು” ಎಂದುಕೊಂಡನು.

¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.

¶ ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.

ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು.

ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು.

¶ ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;

¶ ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?

ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,