ಇದಲ್ಲದೆ ಅವನು ಸಮಾಧಾನ ಯಜ್ಞವನ್ನು ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬುವನನ್ನು ಅವನ ಊರಾದ ಗೀಲೋವಿನಿಂದ ಬರುವಂತೆ ತಿಳಿಸಿದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದದ್ದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.
TSK
TSK · ಙ್ಞಾನೋಕ್ತಿಗಳು 17:11
Treasury of Scripture Knowledge references in ಕನ್ನಡ IRV.
ಯೋವಾಬನ ಆಯುಧಗಳನ್ನು ಹೊರುವ ಹತ್ತು ಮಂದಿ ಯೌವನಸ್ಥರು ಬಂದು ಅವನನ್ನು ಕೊಂದು ಹಾಕಿದರು.
¶ ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.
ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು” ಎಂದು ಹೇಳಿದನು.
ಯೆಹೋಯಾದಾವನ ಮಗನಾದ ಬೆನಾಯನಿಗೆ, “ಅವನನ್ನು ಸಂಹರಿಸು” ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.
ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.
‹ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ”› ಅಂದನು.