TSK

TSK · ಙ್ಞಾನೋಕ್ತಿಗಳು 17:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.

ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.

ಆ ಮೇಲೆ ಯೋಬನು ನೂರನಲ್ವತ್ತು ವರ್ಷ ಬಾಳಿ ತನ್ನ ಮಕ್ಕಳನ್ನು, ಮೊಮ್ಮಕ್ಕಳನ್ನು ಅಂತು ತನ್ನ ಸಂತಾನದ ನಾಲ್ಕು ತಲೆಗಳನ್ನು ಕಂಡನು.

ಅಂತಃಪುರದಲ್ಲಿರುವ ನಿನ್ನ ಹೆಂಡತಿಯು, ಫಲಭರಿತವಾದ ದ್ರಾಕ್ಷಾಲತೆಯಂತೆ ಇರುವಳು; ನಿನ್ನ ಸಂಗಡ ಊಟದ ಮಣೆಯ ಸುತ್ತಲೂ ಕುಳಿತುಕೊಳ್ಳುವ ನಿನ್ನ ಮಕ್ಕಳು, ಎಣ್ಣೇಮರದ ಸಸಿಗಳ ಹಾಗೆ ಇರುವರು.