ಯಾಜಕಕಾಂಡ 19:35
TSK
¶ “‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
TSK
Treasury of Scripture Knowledge references in ಕನ್ನಡ IRV.
¶ “‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
¶ ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಳ್ಳಬಾರದು.
ನ್ಯಾಯದ ಅಳತೆ ಮತ್ತು ತಕ್ಕಡಿಗಳು ಯೆಹೋವನ ಏರ್ಪಾಡು, ಚೀಲದಲ್ಲಿನ ತೂಕದಕಲ್ಲುಗಳೆಲ್ಲಾ ಆತನ ಕೈಕೆಲಸವೇ.
“ಎಷ್ಟು ಹೊತ್ತಿಗೆ ಅಮಾವಾಸ್ಯೆಯು ತೀರುವುದು? ಧಾನ್ಯವನ್ನು ಮಾರಬೇಕಲ್ಲಾ; ಸಬ್ಬತ್ತು ಇನ್ನೆಷ್ಟು ಹೊತ್ತು ಇರುವುದು? ಗೋದಿಯನ್ನು ಅಂಗಡಿಯಲ್ಲಿ ಇಡಬೇಕಲ್ಲಾ; ಕೊಳಗವನ್ನು ಕಿರಿದುಮಾಡೋಣ; ಬಡವರನ್ನು ನುಂಗುವವರೇ, ತೊಲವನ್ನು ಹೆಚ್ಚಿಸೋಣ; ಸುಳ್ಳು ತಕ್ಕಡಿಯಿಂದ ಮೋಸಮಾಡೋಣ; ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ ಇದನ್ನು ಕೇಳಿರಿ.
ಕಳ್ಳ ತಕ್ಕಡಿಯೂ ಹಾಗು ಮೋಸದ ಕಲ್ಲಿನ ಚೀಲವೂ ಒಬ್ಬನಲ್ಲಿದ್ದರೆ ಅವನು ನಿರ್ದೋಷಿಯಲ್ಲವೆಂದು ತಿಳಿಯಲೋ?