ವಿಮೋಚನಕಾಂಡ 4:11
TSK
ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
TSK
Treasury of Scripture Knowledge references in ಕನ್ನಡ IRV.
ಅದಕ್ಕೆ ಯೆಹೋವನು ಅವನಿಗೆ, “ಮನುಷ್ಯರಿಗೆ ಬಾಯಿಕೊಟ್ಟವನು ಯಾರು? ಒಬ್ಬನನ್ನು ಮೂಕನಾಗಿ, ಕಿವುಡನಾಗಿ, ದೃಷ್ಠಿಯುಳ್ಳವನಾಗಿ ಹಾಗೂ ಕುರುಡನಾಗಿ ಉಂಟುಮಾಡಿದವನಾರು? ಯೆಹೋವನಾದ ನಾನೇ ಅಲ್ಲವೇ?
ನನ್ನ ಕಣ್ಣುಗಳನ್ನು ತೆರೆ, ಆಗ ನಿನ್ನ ಧರ್ಮಶಾಸ್ತ್ರದ ಅದ್ಭುತಗಳನ್ನು ಕಂಡುಕೊಳ್ಳುವೆನು.
‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.