ಕೀರ್ತನೆಗಳು 21:7
TSK
ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
TSK
Treasury of Scripture Knowledge references in ಕನ್ನಡ IRV.
ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.
ಪ್ರೀತಿ, ಸತ್ಯತೆಗಳು ನಿನ್ನನ್ನು ಬಿಡದಿರಲಿ, ಅವುಗಳನ್ನು ನಿನ್ನ ಕೊರಳಿಗೆ ಕಟ್ಟು, ನಿನ್ನ ಹೃದಯದ ಹಲಗೆಯ ಮೇಲೆ ಅವುಗಳನ್ನು ಬರೆ.
ರಾಜರು ಸಿಂಹಾಸನಕ್ಕೆ ಧರ್ಮವೇ ಆಧಾರವೆಂದು ತಿಳಿದು, ಅಧರ್ಮವನ್ನಾಚರಿಸಲು ಅಸಹ್ಯಪಡುವರು.
ಇದಲ್ಲದೆ ಸಿಂಹಾಸನವು ಒಡಂಬಡಿಕೆಯ ನಂಬಿಗಸ್ತಿಕೆಯಲ್ಲಿ ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ ದಾವೀದನ ಗುಡಾರದಲ್ಲಿನ ಆ ಸಿಂಹಾಸನದ ಮೇಲೆ ಸತ್ಯಪರನಾಗಿ ನೀತಿನ್ಯಾಯದಿಂದ ಕುಳಿತುಕೊಳ್ಳುವನು.