TSK

TSK · ಙ್ಞಾನೋಕ್ತಿಗಳು 21:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.

ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

¶ ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.

ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.

¶ ‹“ಭೂಲೋಕದಲ್ಲಿ ಸಂಪತ್ತು ಮಾಡಿ ಇಟ್ಟುಕೊಳ್ಳಬೇಡಿರಿ; ಇಲ್ಲಿ ಅದು ನುಸಿ ಹಿಡಿದು, ಕಿಲುಬು ಹತ್ತಿ ಕೆಟ್ಟುಹೋಗುವುದು; ಇಲ್ಲಿ ಕಳ್ಳರು ಕನ್ನಾಕೊರೆದು ಕದಿಯುವರು.›

‹ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.›

‹ಹೀಗೆ ಅವನು ಎಲ್ಲಾ ಹಾಳುಮಾಡಿಕೊಂಡ ಮೇಲೆ ಆ ದೇಶದಲ್ಲೆಲ್ಲಾ ಘೋರವಾದ ಬರ ಬಂದು ಏನೂ ಗತಿಯಿಲ್ಲದವನಾದನು.›

¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›