¶ ಯೋಸೇಫನು ಐಗುಪ್ತ ದೇಶದ ಅರಸನಾದ ಫರೋಹನ ಸನ್ನಿಧಿಯಲ್ಲಿ ನಿಂತಾಗ ಮೂವತ್ತು ವರ್ಷದವನಾಗಿದ್ದನು. ಅವನು ಫರೋಹನ ಸನ್ನಿಧಿಯಿಂದ ಹೊರಟು ಐಗುಪ್ತದೇಶದಲ್ಲೆಲ್ಲಾ ಸಂಚಾರಮಾಡಿದನು.
TSK
TSK · ಙ್ಞಾನೋಕ್ತಿಗಳು 22:29
Treasury of Scripture Knowledge references in ಕನ್ನಡ IRV.
ದಾವೀದನು ಈ ಪ್ರಕಾರ ವಿಚಾರಿಸುತ್ತಿರುವುದನ್ನು ಕೇಳಿದವರು ಸೌಲನಿಗೆ ತಿಳಿಸಿದರು. ಅವನು ದಾವೀದನನ್ನು ಕರೆದುಕೊಂಡು ಬರಲು ಹೇಳಿದನು.
ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.
ಮೇಲೆ ಕಂಡ ಜನರು ಕುಂಬಾರರು. ಅವರು ನೆಟಾಯಿಮ್ ಮತ್ತು ಗೆದೇರ ಎಂಬ ಊರುಗಳಲ್ಲಿ ವಾಸಿಸುತ್ತಾ ಅರಸನ ಸೇವೆಯನ್ನು ಮಾಡುತ್ತಿದ್ದರು.
ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
ಮತ್ತು ಪ್ರಧಾನರಲ್ಲಿ ಅಂಗದೋಷವಿಲ್ಲದವರೂ, ಸುಂದರರೂ, ಸಮಸ್ತ ಶಾಸ್ತ್ರಜ್ಞರೂ, ಪಂಡಿತರೂ, ವಿದ್ಯಾನಿಪುಣರೂ, ರಾಜಾಲಯದಲ್ಲಿ ಸನ್ನಿಧಿ ಸೇವೆಮಾಡಲು ಸಮರ್ಥರೂ ಆದ ಕೆಲವು ಯುವಕರನ್ನು ಇಲ್ಲಿಗೆ ಕರೆದುತಂದು ಅವರಿಗೆ ಕಸ್ದೀಯ ಪಂಡಿತರ ಭಾಷೆಯನ್ನೂ, ಶಾಸ್ತ್ರಗಳನ್ನೂ ಕಲಿಸಬೇಕು” ಎಂಬುದಾಗಿ ಅಪ್ಪಣೆಕೊಟ್ಟನು.
‹ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.›
ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರಿ.