TSK

TSK · ಙ್ಞಾನೋಕ್ತಿಗಳು 23:32

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಹಾಕಲು ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.

ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವುದು.

ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು.

ಅದಕ್ಕೆ ಯೆಹೋವನು, “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು, ಮಂತ್ರಕ್ಕೆ ಅಧೀನವಾಗದ ನಾಗಗಳನ್ನು ಬಿಡುವೆನು; ಅವು ನಿಮ್ಮನ್ನು ಕಚ್ಚುವವು” ಎಂದು ನುಡಿದಿದ್ದಾನೆ.

ಕರ್ಮೆಲ್ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ ಅಲ್ಲಿಂದಲೂ ಹಿಡಿದು ತರುವೆನು. ನನ್ನ ಕಣ್ಣಿಗೆ ಮರೆಯಾಗಿ ಸಮುದ್ರದತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ನನ್ನ ಅಪ್ಪಣೆಯ ಪ್ರಕಾರ ಘಟಸರ್ಪವು ಅವರನ್ನು ಕಚ್ಚುವುದು.

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?