TSK

TSK · ಙ್ಞಾನೋಕ್ತಿಗಳು 24:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಲೋಟನು ಕಣ್ಣೆತ್ತಿ ನೋಡಲಾಗಿ, ಯೊರ್ದನ್ ಹೊಳೆಯ ಸುತ್ತಲಿನ ಪ್ರದೇಶವು ಚೋಗರಿನವರೆಗೆ ನೀರಾವರಿಯ ಪ್ರದೇಶವೆಂದು ತಿಳಿದುಕೊಂಡನು. ಯೆಹೋವನು ಸೊದೋಮ್ ಗೊಮೋರ ಪಟ್ಟಣಗಳನ್ನು ನಾಶಮಾಡುವುದಕ್ಕಿಂತ ಮೊದಲು ಆ ಸೀಮೆಯು ಯೆಹೋವನ ವನದಂತೆಯೂ, ಐಗುಪ್ತ ದೇಶದಂತೆಯೂ ನೀರಾವರಿಯ ಪ್ರದೇಶವಾಗಿತ್ತು.

ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

ಯೆಹೋವನ ಸನ್ನಿಧಿಯಲ್ಲಿ ಶಾಂತನಾಗಿ ಆತನಿಗೋಸ್ಕರ ಕಾದಿರು; ಕುಯುಕ್ತಿಗಳನ್ನು ನೆರವೇರಿಸಿಕೊಂಡು ಅಭಿವೃದ್ಧಿ ಹೊಂದುವವನನ್ನು ನೋಡಿ ಉರಿಗೊಳ್ಳಬೇಡ.

ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.

ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?