ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.
TSK
TSK · ಙ್ಞಾನೋಕ್ತಿಗಳು 24:15
Treasury of Scripture Knowledge references in ಕನ್ನಡ IRV.
ಅವನು ಗ್ರಾಮಗಳ ಸಂದುಗೊಂದುಗಳಲ್ಲಿ ಹೊಂಚಿಕೊಂಡಿದ್ದು, ಮರೆಯಾದ ಸ್ಥಳಗಳಲ್ಲಿ ನಿರಪರಾಧಿಗಳನ್ನು ಕೊಲ್ಲುತ್ತಾನೆ. ಅವನು ಗತಿಹೀನನನ್ನು ಹಿಡಿಯುವುದಕ್ಕೆ ಸಮಯ ನೋಡುತ್ತಾನೆ.
ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.
ಗರ್ವಿಷ್ಠರು ನನಗೋಸ್ಕರ ಗುಪ್ತಸ್ಥಳದಲ್ಲಿ ಉರುಲನ್ನೂ, ಪಾಶಗಳನ್ನೂ ಒಡ್ಡಿದ್ದಾರೆ, ದಾರಿಯ ಮಗ್ಗುಲಲ್ಲಿ ಬಲೆಹಾಸಿದ್ದಾರೆ, ನನಗಾಗಿ ಬಲೆಬೀಸಿಟ್ಟಿದ್ದಾರೆ. ಸೆಲಾ
ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.
ಆದರೆ ಅವರ ಗೂಢಾಲೋಚನೆಯು ಸೌಲನಿಗೆ ತಿಳಿದುಬಂದಿತು. ಅವನನ್ನು ಕೊಲ್ಲುವುದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.
ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.