TSK

TSK · ಙ್ಞಾನೋಕ್ತಿಗಳು 24:31

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.

ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?

ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.

ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.

¶ ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

‹ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.›