TSK

TSK · ಙ್ಞಾನೋಕ್ತಿಗಳು 24:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,

ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.

ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.

ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.

ಆಗ ಆತನು ಅವರಿಗೆ, ‹“ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ”› ಎಂದು ಹೇಳಿದನು.