TSK

TSK · ಙ್ಞಾನೋಕ್ತಿಗಳು 24:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.

ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.

ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.

‹ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.›

‹ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.›

ನಾವು ದೇವಜ್ಞಾನಕ್ಕೆ ವಿರೋಧವಾಗಿ ಏಳುವ ಅಹಂಭಾವಗಳನ್ನು ಧ್ವಂಸಮಾಡಿ, ಪ್ರತಿಯೊಂದು ಆಲೋಚನೆಗಳನ್ನೂ ಕ್ರಿಸ್ತನಿಗೆ ವಿಧೇಯರಾಗುವಂತೆ ಸೆರೆಹಿಡಿದು,