TSK

TSK · ಙ್ಞಾನೋಕ್ತಿಗಳು 27:17

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಇದಲ್ಲದೆ ಅವರು “ಯೆಹೋಶುವನಿಗೆ ನಿಶ್ಚಯವಾಗಿ ಯೆಹೋವನು ಆ ದೇಶವನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿಮಿತ್ತ ನಡುಗುತ್ತಾ ಕಂಗೆಟ್ಟು ಹೋಗಿದ್ದಾರೆ” ಎಂದು ತಿಳಿಸಿದರು.

ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹರಿತ ಮಾಡಿಸುವುದಕ್ಕೆ ಫಿಲಿಷ್ಟಿಯರ ಹತ್ತಿರವೇ ಹೋಗಬೇಕಿತ್ತು.

¶ ಯೋವಾಬನು ಅವನಿಗೆ, “ಅರಾಮ್ಯರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ. ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುವೆನು.

ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

ಜೋಲುಬಿದ್ದ ಕೈಗಳನ್ನೂ, ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ.

ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.