¶ ಅದಕ್ಕೆ ಆ ಮನುಷ್ಯನು, “ನನ್ನ ಜೊತೆಯಲ್ಲಿರುವುದಕ್ಕೆ ನೀನು ಕೊಟ್ಟ ಈ ಸ್ತ್ರೀಯು, ಆ ಮರದ ಹಣ್ಣನ್ನು ನನಗೆ ಕೊಟ್ಟಳು, ನಾನು ತಿಂದೆನು” ಎಂದು ಹೇಳಿದನು.
TSK
TSK · ಙ್ಞಾನೋಕ್ತಿಗಳು 28:13
Treasury of Scripture Knowledge references in ಕನ್ನಡ IRV.
¶ ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ, “ನಾನು ನಿಮ್ಮ ದೇವರಾದ ಯೆಹೋವನಿಗೂ, ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ.
ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.
¶ ಸೌಲನು ಸಮುವೇಲನಿಗೆ, “ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.
¶ ಆಗ ದಾವೀದನು ನಾತಾನನಿಗೆ, “ನಾನು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದ್ದೇನೆ” ಎಂದು ಹೇಳಿದನು. ನಾತಾನನು ಅವನಿಗೆ “ಯೆಹೋವನು ನಿನ್ನ ಪಾಪವನ್ನು ಕ್ಷಮಿಸಿದ್ದಾನೆ, ನೀನು ಸಾಯುವುದಿಲ್ಲ.
ಯೆಶಾಯನು ತಿರುಗಿ ಹಿಜ್ಕೀಯನನ್ನು, “ಅವರು ನಿನ್ನ ಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿ ಇರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಂದು ವಸ್ತುವು ಇರುವುದಿಲ್ಲ” ಎಂದನು.
ಆಗ ಏಲಾಮ್ ಸಂತಾನದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ಇಸ್ರಾಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧವಾಗಿ ದ್ರೋಹಮಾಡಿದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆಯು ಇನ್ನೂ ಉಂಟು.
ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.
ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.
ದ್ವೇಷವು ಜಗಳಗಳನ್ನೆಬ್ಬಿಸುತ್ತದೆ, ಪ್ರೀತಿಯು ಪಾಪಗಳನ್ನೆಲ್ಲಾ ಮುಚ್ಚುತ್ತದೆ.
ದುಷ್ಟನು ತನ್ನ ದುರ್ಮಾರ್ಗವನ್ನು ಬಿಡಲಿ, ಕೆಡುಕನು ತನ್ನ ದುರಾಲೋಚನೆಗಳನ್ನು ತ್ಯಜಿಸಲಿ; ಯೆಹೋವನ ಕಡೆಗೆ ತಿರುಗಿಕೊಂಡು ಬರಲಿ, ಆತನು ಅವನನ್ನು ಕರುಣಿಸುವನು; ನಮ್ಮ ದೇವರನ್ನು ಆಶ್ರಯಿಸಲಿ, ಆತನು ಮಹಾಕೃಪೆಯಿಂದ ಕ್ಷಮಿಸುವನು.
ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.
¶ ನಾನು ಬಾಯಿಬಿಟ್ಟು ಬೇಡಿಕೊಂಡು ನನ್ನ ಮತ್ತು ನನ್ನ ಜನರಾದ ಇಸ್ರಾಯೇಲರ ಪಾಪವನ್ನು ಅರಿಕೆ ಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ನನ್ನ ದೇವರಾದ ಯೆಹೋವನಿಗೆ ಬಿನ್ನವಿಸಿದೆನು.
ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.